ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ

ಇಲಾಖೆಯು ರಾಪ್ಟ್ರೀಯ ಉದ್ಯೋಗಗಳ ಸೇವೆಯನ್ನು ನಿರುದ್ಯೋಗಿ ಯುವಕರ ಅನುಕೂಲಕ್ಕಾಗಿ ವೃತ್ತಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಿ ಉದ್ಯೋಗ ಪಡೆದುಕೊಳ್ಳಲು ಅಥವಾ ಸ್ವಂತ ಉದ್ಯೋಗ ಹೊಂದಲು ತರಬೇತಿಯನ್ನು ನೀಡುತ್ತಿದೆ. 

ಉದ್ಯೋಗ ಸೇವೆಗಳನ್ನು, ಉದ್ಯೋಗ ವಿನಿಮಯ ಕಛೇರಿಗಳು ವೃತ್ತಿ ಶಿಕ್ಷಣ ಮಾರ್ಗದರ್ಶನ ಕಛೇರಿ, ವೃತ್ತಿ ಶಿಕ್ಷಣ ತರಬೇತಿ ಯೋಜನೆಗಳ ಮೂಲಕ ನೀಡಲಾಗುತ್ತದೆ.ಈ ವೃತ್ತಿ ಶಿಕ್ಷಣ ಸಂಸ್ಥೆಗಳ ಜಾಲವು ಸರ್ಕಾರಿ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಮತ್ತು ಔದ್ಯೋಗಿಕ ಸಂಸ್ಥೆಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮತ್ತು ತರಬೇತಿ ಇಲಾಖೆಯು 1945ನೇ ಇಸವಿಯಲ್ಲಿ ಪ್ರಾರಂಭವಾಯಿತು.

ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಒಂದೇ ನಿರ್ವಹಣೆ ವ್ಯವಸ್ಥೆಯಡಿಯಲ್ಲಿ ತರುವ ಮೂಲಕ ಉದ್ಯೋಗಾವಕಾಶಗಳನ್ನು ಯುವಜನತೆಗೆ ಹೆಚ್ಚಿಸಲು ಸರ್ಕಾರ ದಿನಾಂಕ 24/09/2016 ರಲ್ಲಿ “ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ” ಎಂಬ ಹೊಸ ಇಲಾಖೆಯನ್ನುಸ್ಥಾಪಿಸಲಾಯಿತು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಕಾರ್ಯ ನಿರ್ವಹಿಸುತ್ತಿದೆ.

ಇಲಾಖೆಯು ವಿವಿಧ ಅಲ್ಪಾವಧಿ ಮತ್ತು ದೀರ್ಘಾವಧಿ ವೃತ್ತಿಗಳಲ್ಲಿ ಕೌಶಲ್ಯ ತರಬೇತಿ ನೀಡಿ ಕೈಗಾರಿಕೆಗಳಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು.ಪಡೆಯಲು ಅಥವಾ ಸ್ವಂತ ಉದ್ಯೋಗಗಳನ್ನು ಕೈಗೊಳ್ಳಲು ನೆರವಾಗುತ್ತಿದೆ.   

ಇಲಾಖೆಯು ಮುಖ್ಯವಾಗಿ 2 ವಿಭಾಗಗಳಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.

1)      ತರಬೇತಿ ವಿಭಾಗ: -  ಕೈಗಾರಿಕಾ ತರಬೇತಿ ಸಂಸ್ಥೆಗಳು ( ಕೈ.ತ.ಸಂ.)

2)      ಉದ್ಯೋಗ ವಿಭಾಗ: - ರಾಜ್ಯದಲ್ಲಿ 34 ಉದ್ಯೋಗವಿನಿಮಯ ಕೇಂದ್ರಗಳು

 

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯವು ಬೆಂಗಳೂರಿನ ಡೈರಿ ವೃತ್ತ, ಬನ್ನೇರುಘಟ್ಟ ರಸ್ತೆ ಯಲ್ಲಿನ ಕೌಶಲ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಉದ್ಯೋಗ ವಿಭಾಗ

 ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ, ಉದ್ಯೋಗ ವಿಭಾಗವು, ನಿರಂತರ ಬದಲಾಗುತ್ತಿರುವ ಮಾರುಕಟ್ಟೆ ಬೇಡಿಕೆಯ ಸಮಯದಲ್ಲಿ ಜನತೆಗೆ ಸಮರ್ಥ ಉದ್ಯೋಗ ಸೇವೆಯನ್ನುಒದಗಿಸುವ  ಮಹಾತ್ವಾಕಾಂಕ್ಷೆಯನ್ನು  ಹೊಂದಿದ್ದು, ಆ ನಿಟ್ಟಿನಲ್ಲಿ ರಾಜ್ಯದ ವಿವಿಧ ಉದ್ಯೋಗ ವಿನಿಮಯ ಕಛೇರಿಗಳು ಹಾಗೂ ವಿಶ್ವ ವಿದ್ಯಾಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರಗಳ ಮುಖಾಂತರ ನಿರಂತರ ಕಾರ್ಯೋನ್ಮುಖವಾಗಿರುತ್ತದೆ.

ಇತ್ತೀಚಿನ ನವೀಕರಣ​ : 04-06-2022 09:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080